Lumina
1Corinthians

1Corinthians 11

1Corinthians 11·Kannada Bible

1ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.

2ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

3ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

4ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.

5ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.

1Corinthians 11 illustration - 1Corinthians Chapter 11

6ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.

7ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.

8ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು.

9ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.

10ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.

1Corinthians 11 illustration - 1Corinthians Chapter 11

11ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ.

12ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು.

13ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ?

14ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?

15ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ;

1Corinthians 11 illustration - 1Corinthians Chapter 11

16ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.

17ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.

18ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.

19ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.

20ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.

1Corinthians 11 illustration - 1Corinthians Chapter 11

21ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.

22ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.

23ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು

24ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.

25ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.

1Corinthians 11 illustration - 1Corinthians Chapter 11

26ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

27ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.

28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.

29ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.

30ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.

1Corinthians 11 illustration - 1Corinthians Chapter 11

31ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.

32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.

33ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.

34ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

Chapter Complete

You have read 1Corinthians 11

34 verses