Lumina
1Corinthians

1Corinthians 6

1Corinthians 6·Kannada Bible

1ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?

2ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?

3ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?

4ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.

5ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?

1Corinthians 6 illustration - 1Corinthians Chapter 6

6ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.

7ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?

8ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.

9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

10ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.

1Corinthians 6 illustration - 1Corinthians Chapter 6

11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.

12ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.

13ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.

14ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.

15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.

1Corinthians 6 illustration - 1Corinthians Chapter 6

16ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.

17ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.

18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.

19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;

20ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

Chapter Complete

You have read 1Corinthians 6

20 verses