Lumina
1Corinthians

1Corinthians 7

1Corinthians 7·Kannada Bible

1ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.

2ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.

3ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.

4ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.

5ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.

1Corinthians 7 illustration - 1Corinthians Chapter 7

6ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.

7ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.

8ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;

9ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.

10ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.

1Corinthians 7 illustration - 1Corinthians Chapter 7

11ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.

12ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.

13ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.

14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.

15ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

1Corinthians 7 illustration - 1Corinthians Chapter 7

16ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?

17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.

18ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.

19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.

20ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.

1Corinthians 7 illustration - 1Corinthians Chapter 7

21ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.

22ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.

23ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.

24ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.

25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.

1Corinthians 7 illustration - 1Corinthians Chapter 7

26ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.

27ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.

28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.

29ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ

30ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ

1Corinthians 7 illustration - 1Corinthians Chapter 7

31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.

32ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

33ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.

34ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು

35ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.

1Corinthians 7 illustration - 1Corinthians Chapter 7

36ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.

37ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.

38ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.

39ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.

40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.

Chapter Complete

You have read 1Corinthians 7

40 verses