Lumina
Deuteronomy

Laws of the Assembly

Deuteronomy 23·Kannada Bible

1ಬೀಜದಲ್ಲಿ ಗಾಯವುಳ್ಳವನೂ ರಹಸ್ಯಾಂಗ ಕೊಯ್ಯಲ್ಪಟ್ಟವನೂ ಕರ್ತನ ಸಭೆಗೆ ಸೇರ ಬಾರದು.

2ಜಾರಳ ಮಗನು ಕರ್ತನ ಸಭೆಗೆ ಸೇರ ಬಾರದು; ಅವನ ಹತ್ತನೇ ತಲಾಂತರದವರೆಗೂ ಕರ್ತನ ಸಭೆಗೆ ಸೇರಬಾರದು.

3ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.

4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.

5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.

Deuteronomy 23 illustration - Deuteronomy Chapter 23

6ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.

7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.

8ಅವರಿಗೆ ಹುಟ್ಟುವ ಮಕ್ಕಳು ಮೂರನೇ ತಲಾಂತರದಲ್ಲಿ ಕರ್ತನ ಸಭೆಯಲ್ಲಿ ಸೇರಬಹುದು.

9ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಸೈನ್ಯ ದೊಡನೆ ಹೊರಟರೆ ದುಷ್ಟ ಕಾರ್ಯಗಳಿಗೆಲ್ಲಾ ದೂರ ವಾಗಿರುವಂತೆ ನಿನ್ನನ್ನು ಕಾಪಾಡಿಕೋ.

10ರಾತ್ರಿಯಲ್ಲಿ ಸಂಭವಿಸಿದ ಕಾರ್ಯದ ದೆಸೆಯಿಂದ ಶುದ್ಧವಲ್ಲದ ಮನುಷ್ಯನು ನಿಮ್ಮಲ್ಲಿದ್ದರೆ ಅವನು ಪಾಳೆಯದ ಹೊರಗೆ ಹೋಗಬೇಕು; ಪಾಳೆಯದ ಒಳಗೆ ಬರಬಾರದು.

Deuteronomy 23 illustration - Deuteronomy Chapter 23

11ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.

12ಇದಲ್ಲದೆ ನೀನು ಹೊರಗಡೆ ಹೋಗುವದಕ್ಕೆ ನಿನಗೆ ಪಾಳೆಯದ ಹೊರಗೆ ಸ್ಥಳವಿರಬೇಕು.

13ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು.

14ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.

15ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.

Deuteronomy 23 illustration - Deuteronomy Chapter 23

16ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.

17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.

18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.

19ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.

20ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.

Deuteronomy 23 illustration - Deuteronomy Chapter 23

21ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.

22ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ.

23ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.

24ನಿನ್ನ ನೆರೆಯವನ ದ್ರಾಕ್ಷೇತೋಟಕ್ಕೆ ಬಂದರೆ ನಿನಗೆ ಮನಸ್ಸು ಬಂದ ಹಾಗೆ ತೃಪ್ತಿಯಾಗುವ ವರೆಗೆ ಹಣ್ಣುಗಳನ್ನು ತಿನ್ನಬಹುದು;

25ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.

Chapter Complete

You have read Deuteronomy 23

25 verses