Lumina
Ephesians

Ephesians 3

Ephesians 3·Kannada Bible

1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು

2ನಿಮಗೋಸ್ಕರ ವಾಗಿ ನನಗೆ ಕೊಡಲ್ಪಟ್ಟ ದೇವರ ಕೃಪಾಯುಗದ ವಿಷಯದಲ್ಲಿ ನೀವು ಕೇಳಿರುವದಾದರೆ

3ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು;

4(ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)

5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.

Ephesians 3 illustration - Ephesians Chapter 3

6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.

7ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.

9ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ

10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.

Ephesians 3 illustration - Ephesians Chapter 3

11ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.

12ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.

13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.

14ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ

15ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು

Ephesians 3 illustration - Ephesians Chapter 3

16ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ

17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು

18ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ

19ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.

20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆ

Ephesians 3 illustration - Ephesians Chapter 3

21ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್‌.

Chapter Complete

You have read Ephesians 3

21 verses