Lumina
Exodus

The Tabernacle Pattern

Exodus 25·Kannada Bible

1ಆಗ ಕರ್ತನು ಮಾತನಾಡಿ ಮೋಶೆಗೆ--

2ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.

3ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ

4ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು

5ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.

Exodus 25 illustration - Exodus Chapter 25

6ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ

7ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.

8ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.

9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.

10ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.

Exodus 25 illustration - Exodus Chapter 25

11ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.

12ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.

13ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,

14ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.

15ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.

Exodus 25 illustration - Exodus Chapter 25

16ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.

17ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.

18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.

19ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.

20ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.

Exodus 25 illustration - Exodus Chapter 25

21ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.

22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.

23ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.

24ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.

25ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.

Exodus 25 illustration - Exodus Chapter 25

26ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು.

27ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು.

28ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.

29ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.

30ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.

Exodus 25 illustration - Exodus Chapter 25

31ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.

32ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.

33ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.

34ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.

35ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.

Exodus 25 illustration - Exodus Chapter 25

36ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.

37ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.

38ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.

39ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.

40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.

Chapter Complete

You have read Exodus 25

40 verses