Lumina
Exodus

The Altar and the Court

Exodus 27·Kannada Bible

1ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.

2ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.

3ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.

4ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.

5ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು.

Exodus 27 illustration - Exodus Chapter 27

6ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.

7ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.

8ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.

9ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.

10ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.

Exodus 27 illustration - Exodus Chapter 27

11ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು.

12ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು.

13ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು.

14ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು.

15ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು.

Exodus 27 illustration - Exodus Chapter 27

16ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು.

17ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು.

18ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು.

19ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.

20ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್‌ ಮಕ್ಕಳಿಗೆ ಅಪ್ಪಣೆಕೊಡಬೇಕು.

Exodus 27 illustration - Exodus Chapter 27

21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್‌ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.

Chapter Complete

You have read Exodus 27

21 verses