Lumina
Ezekiel

Judgment and Promise

Ezekiel 11·Kannada Bible

1ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.

2ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--

3ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಈ ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ.

4ಆದದರಿಂದ ಓ ಮನುಷ್ಯ ಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.

5ಕರ್ತನ ಆತ್ಮನು ನನ್ನ ಮೇಲೆ ಬಂದು ನನಗೆ ಹೇಳಿದ್ದೇನಂದರೆ--ಮಾತನಾಡು; ಕರ್ತನು--ಇಸ್ರಾ ಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಯಾಕಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನೂ ನಾನು ಬಲ್ಲೆನು.

Ezekiel 11 illustration - Ezekiel Chapter 11

6ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.

7ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.

8ನೀವು ಕತ್ತಿಗೆ ಭಯಪಟ್ಟಿರಿ; ನಾನು ನಿಮ್ಮ ಮೇಲೆ ಒಂದು ಕತ್ತಿ ಯನ್ನು ತರುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.

9ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.

10ನೀವು ಕತ್ತಿಯ ಮೂಲಕ ಬೀಳುವಿರಿ; ನಾನು ನಿಮ್ಮ ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು; ಆಗ ನಾನೇ ಕರ್ತನೆಂದು ನಿಮಗೆ ತಿಳಿಯುವದು.

Ezekiel 11 illustration - Ezekiel Chapter 11

11ಈ ಪಟ್ಟಣವು ನಿಮ್ಮ ಹಂಡೆ ಯಾಗುವದಿಲ್ಲ, ನೀವು ಅದರ ಮಧ್ಯದಲ್ಲಿ ಮಾಂಸ ವಾಗುವದಿಲ್ಲ; ಆದರೆ ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ನ್ಯಾಯತೀರಿ ಸುವೆನು.

12ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.

13ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.

14ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂತು--

15ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.

Ezekiel 11 illustration - Ezekiel Chapter 11

16ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.

17ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್‌ ದೇಶವನ್ನು ನಿಮಗೆ ಕೊಡುತ್ತೇನೆ.

18ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;

19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.

20ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.

Ezekiel 11 illustration - Ezekiel Chapter 11

21ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.

22ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು.

23ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.

24ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.

25ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.

Chapter Complete

You have read Ezekiel 11

25 verses