Lumina
Isaiah

Judgment on the Earth

Isaiah 24·Kannada Bible

1ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.

2ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.

3ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ.

4ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.

5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.

Isaiah 24 illustration - Isaiah Chapter 24

6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

7ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.

8ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.

9ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.

10ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.

Isaiah 24 illustration - Isaiah Chapter 24

11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.

12ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.

13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.

14ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.

15ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.

Isaiah 24 illustration - Isaiah Chapter 24

16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.

17ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.

18ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).

19ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.

20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.

Isaiah 24 illustration - Isaiah Chapter 24

21ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.

22ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.

23ಆಮೇಲೆ ಚೀಯೋನ್‌ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.

Chapter Complete

You have read Isaiah 24

23 verses