Lumina
Job

Leviathan

Job 41·Kannada Bible

1ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ?

2ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?

3ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?

4ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?

5ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?

Job 41 illustration - Job Chapter 41

6ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?

7ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?

8ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ.

9ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.

10ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?

Job 41 illustration - Job Chapter 41

11ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.

12ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.

13ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?

14ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.

15ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.

Job 41 illustration - Job Chapter 41

16ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ.

17ಒಂದಕ್ಕೊಂದು ಅಂಟುತ್ತವೆ; ಹಿಡು ಕೊಂಡು ಪ್ರತ್ಯೇಕವಾಗುವದಿಲ್ಲ;

18ಅದರ ಸೀನು ವಿಕೆಯಿಂದ ಬೆಳಕು ಹುಟ್ಟುವದು; ಅದರ ಕಣ್ಣುಗಳು ಉದಯದ ರೆಪ್ಪೆಗಳ ಹಾಗೆ ಇವೆ.

19ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ.

20ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.

Job 41 illustration - Job Chapter 41

21ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.

22ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು.

23ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು.

24ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.

25ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.

Job 41 illustration - Job Chapter 41

26ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,

27ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು.

28ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಹುಲ್ಲಿನ ಹಾಗೆ ಆಗುತ್ತವೆ.

29ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು.

30ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ.

Job 41 illustration - Job Chapter 41

31ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ.

32ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.

33ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.

34ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.

Chapter Complete

You have read Job 41

34 verses