Lumina
Matthew

The Twelve Apostles

Matthew 10·Kannada Bible

1ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.

2ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,

3ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,

4ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.

5ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.

Matthew 10 illustration - Matthew Chapter 10

6ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.

7ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.

8ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.

9ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ.

10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.

Matthew 10 illustration - Matthew Chapter 10

11ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;

12ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ.

13ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.

14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.

15ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್‌ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.

Matthew 10 illustration - Matthew Chapter 10

16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.

17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.

18ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.

19ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.

20ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.

Matthew 10 illustration - Matthew Chapter 10

21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.

22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.

23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

24ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.

25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?

Matthew 10 illustration - Matthew Chapter 10

26ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.

27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.

28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.

29ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.

30ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.

Matthew 10 illustration - Matthew Chapter 10

31ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.

32ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;

33ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.

34ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;

35ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.

Matthew 10 illustration - Matthew Chapter 10

36ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.

37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.

38ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.

39ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.

40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.

Matthew 10 illustration - Matthew Chapter 10

41ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.

42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

Chapter Complete

You have read Matthew 10

42 verses