Lumina
Numbers

The First Census

Numbers 1·Kannada Bible

1ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--

2ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.

3ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.

4ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.

5ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್‌ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್‌,

Numbers 1 illustration - Numbers Chapter 1

6ಸಿಮೆಯೋನ್‌ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್‌,

7ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್‌,

8ಇಸ್ಸಾಕಾರ್‌ ಗೋತ್ರದಿಂದ ಚೂವಾರನ ಮಗನಾದ ನೆತನೇಲ್‌,

9ಜೆಬುಲೂನ್‌ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್‌,

10ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್‌,

Numbers 1 illustration - Numbers Chapter 1

11ಬೆನ್ಯಾವಿಾನ್‌ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್‌,

12ದಾನ್‌ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್‌,

13ಆಶೇರ್‌ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್‌,

14ಗಾದ್‌ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್‌.

15ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,

Numbers 1 illustration - Numbers Chapter 1

16ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.

17ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.

18ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.

19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.

20ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು

Numbers 1 illustration - Numbers Chapter 1

21ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.

22ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು

23ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.

24ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

25ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.

Numbers 1 illustration - Numbers Chapter 1

26ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

27ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.

28ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

29ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.

30ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು

Numbers 1 illustration - Numbers Chapter 1

31ಜೆಬುಲೂನ್‌ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.

32ಯೋಸೇಫನ ಮಕ್ಕಳಾದ ಎಫ್ರಾಯಾಮ್‌ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

33ಎಫ್ರಾಯಾಮ್‌ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.

34ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ

35ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.

Numbers 1 illustration - Numbers Chapter 1

36ಬೆನ್ಯಾವಿಾನ್‌ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

37ಬೆನ್ಯಾವಿಾನ್‌ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.

38ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

39ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.

40ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

Numbers 1 illustration - Numbers Chapter 1

41ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.

42ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

43ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.

44ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.

45ಹೀಗೆ ಇಸ್ರಾಯೇಲ್‌ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ

Numbers 1 illustration - Numbers Chapter 1

46ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.

47ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.

48ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ--

49ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್‌ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.

50ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.

Numbers 1 illustration - Numbers Chapter 1

51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.

52ಇಸ್ರಾಯೇಲ್‌ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.

53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್‌ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.

54ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.

Chapter Complete

You have read Numbers 1

54 verses