Lumina
Numbers

The Daughters of Zelophehad; Joshua Chosen

Numbers 27·Kannada Bible

1ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ

2ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--

3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.

4ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.

5ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.

Numbers 27 illustration - Numbers Chapter 27

6ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--

7ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.

8ಇಸ್ರಾಯೇಲ್‌ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು.

9ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.

10ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ.

Numbers 27 illustration - Numbers Chapter 27

11ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್‌ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.

12ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್‌ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.

13ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.

14ನೀವು ಜಿನ್‌ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್‌ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.

15ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.

Numbers 27 illustration - Numbers Chapter 27

16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;

17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.

18ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು

19ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.

20ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.

Numbers 27 illustration - Numbers Chapter 27

21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್‌ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.

22ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ

23ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.

Chapter Complete

You have read Numbers 27

23 verses