Lumina
Numbers

Feast Offerings

Numbers 29·Kannada Bible

1ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.

2ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.

3ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು,

4ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;

5ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ.

Numbers 29 illustration - Numbers Chapter 29

6ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.

7ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.

8ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ

9ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ

10ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ

Numbers 29 illustration - Numbers Chapter 29

11ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.

12ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.

13ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;

14ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು;

15ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;

Numbers 29 illustration - Numbers Chapter 29

16ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.

17ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ

18ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ

19ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.

20ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ

Numbers 29 illustration - Numbers Chapter 29

21ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ

22ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.

23ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ

24ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ

25ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.

Numbers 29 illustration - Numbers Chapter 29

26ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ

27ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ

28ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.

29ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ

30ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ

Numbers 29 illustration - Numbers Chapter 29

31ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.

32ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ

33ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ

34ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.

35ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು.

Numbers 29 illustration - Numbers Chapter 29

36ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ

37ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ

38ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.

39ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದು

40ಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಹೇಳಿದನು.

Chapter Complete

You have read Numbers 29

40 verses