Lumina
Proverbs

Proverbs of Solomon

Proverbs 10·Kannada Bible

1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.

2ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.

3ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.

4ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.

5ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.

Proverbs 10 illustration - Proverbs Chapter 10

6ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.

7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.

8ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.

9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.

10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.

Proverbs 10 illustration - Proverbs Chapter 10

11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.

12ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.

13ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.

14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.

15ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.

Proverbs 10 illustration - Proverbs Chapter 10

16ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.

17ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.

18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.

19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.

20ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.

Proverbs 10 illustration - Proverbs Chapter 10

21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.

22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.

23ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.

24ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.

25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.

Proverbs 10 illustration - Proverbs Chapter 10

26ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.

27ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.

28ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.

29ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.

30ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.

Proverbs 10 illustration - Proverbs Chapter 10

31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.

32ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.

Chapter Complete

You have read Proverbs 10

32 verses