Lumina
Proverbs

A Soft Answer

Proverbs 15·Kannada Bible

1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.

2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.

3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.

4ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.

5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;

Proverbs 15 illustration - Proverbs Chapter 15

6ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.

7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.

8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.

9ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.

10ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.

Proverbs 15 illustration - Proverbs Chapter 15

11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.

12ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.

13ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.

14ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.

15ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.

Proverbs 15 illustration - Proverbs Chapter 15

16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.

17ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.

18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.

19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.

20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.

Proverbs 15 illustration - Proverbs Chapter 15

21ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.

22ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.

23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!

24ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.

25ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.

Proverbs 15 illustration - Proverbs Chapter 15

26ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.

27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.

28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.

29ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.

30ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.

Proverbs 15 illustration - Proverbs Chapter 15

31ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.

32ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.

33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.

Chapter Complete

You have read Proverbs 15

33 verses