Lumina
Proverbs

The Words of Agur

Proverbs 30·Kannada Bible

1ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.

2ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.

3ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.

4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?

5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.

Proverbs 30 illustration - Proverbs Chapter 30

6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.

7ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;

8ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;

9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.

10ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.

Proverbs 30 illustration - Proverbs Chapter 30

11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.

12ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.

13ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.

14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.

15ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.

Proverbs 30 illustration - Proverbs Chapter 30

16ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.

17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.

18ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ--

19ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.

20ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.

Proverbs 30 illustration - Proverbs Chapter 30

21ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು

22ಆಳುವ ದಾಸನು, ಹೊಟ್ಟೆತುಂಬಿದ ನೀಚನು,

23ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು.

24ಭೂಮಿಯ ಮೇಲೆ ಅಧಿಕ ಜ್ಞಾನವು ಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ.

25ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.

Proverbs 30 illustration - Proverbs Chapter 30

26ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.

27ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.

28ಜೇಡರ ಹುಳು ತನ್ನ ಕೈಗಳಿಂದ ಹಿಡಿದುಕೊಳ್ಳುತ್ತದೆ; ಅದು ಅರಮನೆ ಗಳಲ್ಲಿ ಇರುತ್ತದೆ.

29ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.

30ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ.

Proverbs 30 illustration - Proverbs Chapter 30

31ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.

32ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.

33ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.

Chapter Complete

You have read Proverbs 30

33 verses