Lumina
Psalms

Remember His Wonders

Psalms 105·Kannada Bible

1ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.

2ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.

3ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.

4ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.

5ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;

Psalms 105 illustration - Psalms Chapter 105

6ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,

7ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.

8ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ

9ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.

10ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--

Psalms 105 illustration - Psalms Chapter 105

11ನಿನಗೆ ಕಾನಾನ್‌ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.

12ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.

13ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.

14ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.

15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.

Psalms 105 illustration - Psalms Chapter 105

16ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.

17ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.

18ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.

19ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.

20ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.

Psalms 105 illustration - Psalms Chapter 105

21ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ

22ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.

23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.

24ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.

25ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.

Psalms 105 illustration - Psalms Chapter 105

26ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.

27ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.

28ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.

29ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.

30ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.

Psalms 105 illustration - Psalms Chapter 105

31ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.

32ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು.

33ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.

34ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,

35ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು.

Psalms 105 illustration - Psalms Chapter 105

36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.

37ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.

38ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.

39ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.

40ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.

Psalms 105 illustration - Psalms Chapter 105

41ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.

42ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.

43ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,

44ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.

45ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.

Chapter Complete

You have read Psalms 105

45 verses