1ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
2ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
3ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
4ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
5ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?

6ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
7ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವ
8ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
You have read Psalms 114
8 verses