Lumina
Psalms

Praise the LORD, O My Soul

Psalms 146·Kannada Bible

1ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು.

2ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.

3ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;

4ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.

5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.

Psalms 146 illustration - Psalms Chapter 146

6ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.

7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.

8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;

9ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.

10ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.

Chapter Complete

You have read Psalms 146

10 verses