Lumina
Psalms

Praise Ye Him All His Hosts

Psalms 148·Kannada Bible

1ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.

2ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;

3ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.

4ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.

5ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.

Psalms 148 illustration - Psalms Chapter 148

6ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.

7ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,

8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,

9ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,

10ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,

Psalms 148 illustration - Psalms Chapter 148

11ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,

12ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,

13ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.

14ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.

Chapter Complete

You have read Psalms 148

14 verses