Lumina
Psalms

Praise Ye the LORD

Psalms 150·Kannada Bible

1ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.

2ಆತನ ಪರಾಕ್ರಮಗಳಿಗೋಸ್ಕರ ಆತನನ್ನು ಸ್ತುತಿಸಿರಿ; ಆತನ ಮಹಾ ಪ್ರಭಾವದ ಪ್ರಕಾರ ಆತನನ್ನು ಸ್ತುತಿಸಿರಿ.

3ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.

4ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.

5ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.

Psalms 150 illustration - Psalms Chapter 150

6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.

Chapter Complete

You have read Psalms 150

6 verses