Lumina
Psalms

The Reign of the Anointed

Psalms 2·Kannada Bible

1ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?

2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.

3ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.

4ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.

5ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.

Psalms 2 illustration - Psalms Chapter 2

6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.

7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

8ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.

9ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.

10ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.

Psalms 2 illustration - Psalms Chapter 2

11ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.

12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.

Chapter Complete

You have read Psalms 2

12 verses