1ಕರ್ತನು ನನ್ನ ಕುರುಬನು; ಕೊರತೆಪಡೆನು.
2ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
3ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

6ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
You have read Psalms 23
6 verses