Lumina
Psalms

Fret Not Thyself

Psalms 37·Kannada Bible

1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.

2ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.

3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.

4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.

5ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.

Psalms 37 illustration - Psalms Chapter 37

6ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.

7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.

8ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ.

9ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.

10ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.

Psalms 37 illustration - Psalms Chapter 37

11ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.

12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.

13ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.

14ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.

15ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.

Psalms 37 illustration - Psalms Chapter 37

16ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.

17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.

18ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.

19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.

20ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.

Psalms 37 illustration - Psalms Chapter 37

21ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.

22ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.

23ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.

24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.

25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.

Psalms 37 illustration - Psalms Chapter 37

26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.

27ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.

28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.

29ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.

30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.

Psalms 37 illustration - Psalms Chapter 37

31ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.

32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.

33ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.

34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.

35ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.

Psalms 37 illustration - Psalms Chapter 37

36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.

37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.

38ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.

39ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.

40ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.

Chapter Complete

You have read Psalms 37

40 verses