Lumina
Psalms

Clap Your Hands

Psalms 47·Kannada Bible

1ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.

2ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.

3ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.

4ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.

5ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.

Psalms 47 illustration - Psalms Chapter 47

6ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;

7ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.

8ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.

9ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.

Chapter Complete

You have read Psalms 47

9 verses