Lumina
Psalms

Riches Cannot Save

Psalms 49·Kannada Bible

1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;

2ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.

3ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.

4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.

5ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?

Psalms 49 illustration - Psalms Chapter 49

6ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.

7ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ

8ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.

9ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.

10ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.

Psalms 49 illustration - Psalms Chapter 49

11ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.

12ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.

13ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.

14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.

15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.

Psalms 49 illustration - Psalms Chapter 49

16ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.

17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.

18ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.

19ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.

20ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.

Chapter Complete

You have read Psalms 49

20 verses